Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:5
26 ತಿಳಿವುಗಳ ಹೋಲಿಕೆ  

ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.


“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ. ಅವಳನ್ನು ಪ್ರೀತಿ ಮಾಡುವವರೆಲ್ಲಾ ಆಕೆಯೊಂದಿಗೆ ಉಲ್ಲಾಸಪಡಿರಿ. ಅವಳಿಗೋಸ್ಕರ ದುಃಖಿಸಿದವರೆಲ್ಲರೂ, ಆಕೆಯ ಸಂತೋಷಕ್ಕಾಗಿ ಆನಂದಪಡಿರಿ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಜಯಘೋಷವೂ ಹರ್ಷಧ್ವನಿಯೂ ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.


ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು