Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:23 - ಕನ್ನಡ ಸಮಕಾಲಿಕ ಅನುವಾದ

23 ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ. ಅವರು ಜಲರಾಶಿಯಲ್ಲಿ ವ್ಯಾಪಾರ ಮಾಡುವವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹಡಗನು ಹತ್ತಿ ಕಡಲನು ದಾಟಿದರು I ಸಾಗರ ಹಾಯ್ದು‍ವ್ಯಾಪಾರ ಗೈದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಡಗುಹತ್ತಿ ಸಮುದ್ರಪ್ರಯಾಣಮಾಡುತ್ತಾ ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡಿಸುವವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕೆಲವರು ತಮ್ಮ ಉದ್ಯೋಗಗಳ ನಿಮಿತ್ತ ಸಮುದ್ರಯಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:23
6 ತಿಳಿವುಗಳ ಹೋಲಿಕೆ  

ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು


ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.


ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.


ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.


ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು