Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:37 - ಕನ್ನಡ ಸಮಕಾಲಿಕ ಅನುವಾದ

37 ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಉತ್ತು ಬಿತ್ತಿದರು, ನೆಟ್ಟರು ದ್ರಾಕ್ಷಾಲತೆಯನು I ಕೂಡಿಸಿಕೊಂಡರು ಅಧಿಕವಾದ ಆದಾಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೊಲಗಳನ್ನು ಬಿತ್ತಿ ದ್ರಾಕ್ಷಾಲತೆಗಳನ್ನು ನೆಟ್ಟು ಆದಾಯವನ್ನು ಕೂಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಹೊಲಗಳಲ್ಲಿ ಬೀಜ ಬಿತ್ತಿ ತೋಟಗಳಲ್ಲಿ ದ್ರಾಕ್ಷಾಲತೆಗಳನ್ನು ನೆಟ್ಟು ಒಳ್ಳೆಯ ಸುಗ್ಗಿಗಳನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:37
16 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.


“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.


ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು