ಕೀರ್ತನೆಗಳು 107:38 - ಕನ್ನಡ ಸಮಕಾಲಿಕ ಅನುವಾದ38 ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.