Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:1 - ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ರಚಿಸುವೆನಿದೋ ಕವನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಬಾರಿಸುತ್ತಾ ಹಾಡುವೆನು; ನನ್ನ ಅಂತರಂಗವೂ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಹೃದಯಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:1
13 ತಿಳಿವುಗಳ ಹೋಲಿಕೆ  

ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.


ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ.


ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ. ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.


ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.


ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು