Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:8 - ಕನ್ನಡ ಸಮಕಾಲಿಕ ಅನುವಾದ

8 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣ ನನಗೆ I ಜೂದಕುಲ ರಾಜದಂಡವಾಗಿದೆ ನನ್ನ ಕೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:8
7 ತಿಳಿವುಗಳ ಹೋಲಿಕೆ  

ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.


ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು