Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:12 - ಕನ್ನಡ ಸಮಕಾಲಿಕ ಅನುವಾದ

12 ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕರುಣೆತೋರುವವನಾರೂ ಅವನಿಗಿಲ್ಲವಾಗಲಿ I ಅವನ ತಬ್ಬಲಿ ಮಕ್ಕಳನಾರೂ ಕನಿಕರಿಸದಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನಿಗೆ ಕೃಪೆಮಾಡುತ್ತಿರುವವನೂ ಅವನ ದಿಕ್ಕಿಲ್ಲದ ಮಕ್ಕಳಿಗೆ ದಯೆತೋರಿಸುವವನೂ ಯಾವನೂ ಇಲ್ಲವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನಿಗೆ ಯಾರೂ ಕೃಪೆತೋರದಿರಲಿ; ಅವನ ಮಕ್ಕಳಿಗೂ ಯಾರೂ ಕರುಣೆತೋರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:12
9 ತಿಳಿವುಗಳ ಹೋಲಿಕೆ  

ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.


ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು