Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:2 - ಕನ್ನಡ ಸಮಕಾಲಿಕ ಅನುವಾದ

2 ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದುಷ್ಟನೂ ವಂಚಕನೂ ನನಗೆ ವಿರೋಧವಾಗಿ ಬಾಯ್ದೆರೆಯ ಮಾಡಿದ್ದಾರೆ. ಸುಳ್ಳುನಾಲಿಗೆಯು ನನ್ನೊಡನೆ ಮಾತಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ನನ್ನ ವಿಷಯವಾಗಿ ಸುಳ್ಳಾಡುತ್ತಿದ್ದಾರೆ. ಅವರು ಅಸತ್ಯವಾದವುಗಳನ್ನು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:2
16 ತಿಳಿವುಗಳ ಹೋಲಿಕೆ  

ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.


ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು