Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿಮಿತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕರ್ತನೇ, ಯೆಹೋವನೇ, ನಿನ್ನ ಕೃಪೆಯು ಹಿತಕರವಾಗಿದೆ; ನಿನ್ನ ಹೆಸರಿನ ನಿವಿುತ್ತ ನನ್ನ ಪಕ್ಷವನ್ನು ಹಿಡಿದು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನೀನೇ ನನ್ನ ಒಡೆಯನು. ಆದ್ದರಿಂದ ನಿನ್ನ ಹೆಸರಿನ ಘನತೆಗಾಗಿ ನನಗೆ ಸಹಾಯಮಾಡು. ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:21
13 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.


ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.


ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.


ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.


ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು