Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:3 - ಕನ್ನಡ ಸಮಕಾಲಿಕ ಅನುವಾದ

3 ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಹಗೆನುಡಿಗಳಿಂದ ನನ್ನನ್ನು ಮುತ್ತಿಕೊಂಡು ನಿಷ್ಕಾರಣವಾಗಿ ನನ್ನ ಸಂಗಡ ಯುದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:3
14 ತಿಳಿವುಗಳ ಹೋಲಿಕೆ  

ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.


ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.


ಪ್ರವಾಹಗಳ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಳ್ಳುತ್ತವೆ; ಅವು ಸಂಪೂರ್ಣವಾಗಿ ನನ್ನನ್ನು ಮುತ್ತಿಕೊಳ್ಳುತ್ತವೆ.


ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು