Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:5 - ಕನ್ನಡ ಸಮಕಾಲಿಕ ಅನುವಾದ

5 ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಉಪಕಾರವನ್ನು ಮಾಡಿದ್ದರೂ ಅವರು ನನಗೆ ಅಪಕಾರವನ್ನು ಮಾಡುತ್ತಿದ್ದಾರೆ. ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:5
13 ತಿಳಿವುಗಳ ಹೋಲಿಕೆ  

ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.


ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.


ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು