ಕೀರ್ತನೆಗಳು 11:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ? ಅಧ್ಯಾಯವನ್ನು ನೋಡಿ |
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.