Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:4
28 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.


ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;


ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.


“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?


ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.


ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.


ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು