ಕೀರ್ತನೆಗಳು 110:4 - ಕನ್ನಡ ಸಮಕಾಲಿಕ ಅನುವಾದ4 “ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ. ಅಧ್ಯಾಯವನ್ನು ನೋಡಿ |