Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:5
23 ತಿಳಿವುಗಳ ಹೋಲಿಕೆ  

ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.


ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.


ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು