Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:6 - ಕನ್ನಡ ಸಮಕಾಲಿಕ ಅನುವಾದ

6 ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:6
22 ತಿಳಿವುಗಳ ಹೋಲಿಕೆ  

ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.


ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು