Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:9 - ಕನ್ನಡ ಸಮಕಾಲಿಕ ಅನುವಾದ

9 ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:9
39 ತಿಳಿವುಗಳ ಹೋಲಿಕೆ  

ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.


ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.


ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.


ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.


ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.


ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.


ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.


ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.


ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.


ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು