Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ ಗುರಾಣಿಯೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಭುವಿನಲ್ಲಿದೆ ಭರವಸೆ ಆತನ ಭಕ್ತಜನರಿಗೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಭಕ್ತರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನೂ ಗುರಾಣಿಯೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ಭಕ್ತರು ಆತನಲ್ಲಿ ಭರವಸವಿಡುವರು. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:11
11 ತಿಳಿವುಗಳ ಹೋಲಿಕೆ  

ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;


ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.


“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ.


“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ.


ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು