Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:17
8 ತಿಳಿವುಗಳ ಹೋಲಿಕೆ  

“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು