Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:101 - ಕನ್ನಡ ಸಮಕಾಲಿಕ ಅನುವಾದ

101 ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು, ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

101 ನಿನ್ನ ವಾಕ್ಯವನು ಅನುಸರಿಸುವ ಧ್ಯೇಯದಿಂದ I ನನ್ನ ಹೆಜ್ಜೆಗಳನು ತಡೆದೆನು ದುರ್ಮಾರ್ಗದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

101 ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

101 ನನ್ನ ಪಾದಗಳು ಕೆಟ್ಟದಾರಿಗೆ ಹೋಗದಂತೆ ನನ್ನನ್ನು ಕಾಪಾಡು, ಆಗ, ನಾನು ನಿನ್ನ ವಾಕ್ಯವನ್ನೇ ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:101
12 ತಿಳಿವುಗಳ ಹೋಲಿಕೆ  

ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ; ಆದ್ದರಿಂದ ಪ್ರತಿಯೊಂದು ದುರ್ಮಾರ್ಗವನ್ನೂ ದ್ವೇಷಿಸುತ್ತೇನೆ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.


ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು