Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:11 - ಕನ್ನಡ ಸಮಕಾಲಿಕ ಅನುವಾದ

11 ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:11
13 ತಿಳಿವುಗಳ ಹೋಲಿಕೆ  

ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.


ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.


ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು