Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:132 - ಕನ್ನಡ ಸಮಕಾಲಿಕ ಅನುವಾದ

132 ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

132 ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

132 ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

132 ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

132 ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:132
10 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.


ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.


ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.


ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು