Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:144 - ಕನ್ನಡ ಸಮಕಾಲಿಕ ಅನುವಾದ

144 ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

144 ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

144 ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

144 ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು; ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

144 ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:144
23 ತಿಳಿವುಗಳ ಹೋಲಿಕೆ  

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ಯೆಹೋವ ದೇವರೇ, ನನ್ನ ಮೊರೆ ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಕ್ಯದ ಪ್ರಕಾರ ನನಗೆ ಅರಿವನ್ನು ನೀಡಿರಿ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.


ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.


ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.


ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ ನಿಮ್ಮ ಸೇವಕನ ಮೇಲೆ ದಯೆಯಿಡಿರಿ.


ಯೆಹೋವ ದೇವರೇ, ನೀವು ಸಮೀಪವಾಗಿದ್ದೀರಿ, ನಿಮ್ಮ ಆಜ್ಞೆಗಳೆಲ್ಲಾ ಸತ್ಯವಾಗಿವೆ.


ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.


ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು