Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:151 - ಕನ್ನಡ ಸಮಕಾಲಿಕ ಅನುವಾದ

151 ಯೆಹೋವ ದೇವರೇ, ನೀವು ಸಮೀಪವಾಗಿದ್ದೀರಿ, ನಿಮ್ಮ ಆಜ್ಞೆಗಳೆಲ್ಲಾ ಸತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

151 ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

151 ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

151 ಯೆಹೋವನೇ, ನೀನು ನನ್ನ ಹತ್ತಿರವೇ ಇದ್ದೀ; ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

151 ಯೆಹೋವನೇ, ನೀನು ನನಗೆ ಸಮೀಪವಾಗಿರುವೆ. ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:151
10 ತಿಳಿವುಗಳ ಹೋಲಿಕೆ  

ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ನಿಮ್ಮ ನೀತಿಯು ನಿತ್ಯವಾದದ್ದು ನಿಮ್ಮ ನಿಯಮವು ಸತ್ಯವಾದದ್ದು.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು