ಕೀರ್ತನೆಗಳು 119:153 - ಕನ್ನಡ ಸಮಕಾಲಿಕ ಅನುವಾದ153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)153 ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು; ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ. ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.