Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:169 - ಕನ್ನಡ ಸಮಕಾಲಿಕ ಅನುವಾದ

169 ಯೆಹೋವ ದೇವರೇ, ನನ್ನ ಮೊರೆ ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಕ್ಯದ ಪ್ರಕಾರ ನನಗೆ ಅರಿವನ್ನು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

169 ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ, ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

169 ನನ್ನ ಮೊರೆ ಸೇರಲಿ ಪ್ರಭು, ನಿನ್ನ ಸನ್ನಿಧಿಯ I ನಿನ್ನ ವಾಕ್ಯಾನುಸಾರ ನೀಡು ಜ್ಞಾನೋದಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

169 ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ; ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

169 ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:169
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು