Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:18 - ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಕಣ್ಣು ತೆರೆ; ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:18
17 ತಿಳಿವುಗಳ ಹೋಲಿಕೆ  

ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.


ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?


ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.


ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.


ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು