Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:3 - ಕನ್ನಡ ಸಮಕಾಲಿಕ ಅನುವಾದ

3 ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ, ಅನ್ಯಾಯ ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ; ಅನ್ಯಾಯಮಾಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಕೆಟ್ಟದ್ದನ್ನು ಮಾಡದೆ ಆತನಿಗೆ ವಿಧೇಯರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:3
5 ತಿಳಿವುಗಳ ಹೋಲಿಕೆ  

ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.


ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.


ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು