Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:30 - ಕನ್ನಡ ಸಮಕಾಲಿಕ ಅನುವಾದ

30 ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಿನ್ನ ವಿಧಿಗಳನ್ನು ಮುಂದೆಯೇ ಇಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ಸತ್ಯಮಾರ್ಗವನ್ನು ಆರಿಸಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳನ್ನು ಎಚ್ಚರಿಕೆಯಿಂದ ತಿಳಿದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:30
16 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ.


ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.


ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.


ಯೆಹೋವ ದೇವರೇ, ನಿಮ್ಮ ಪುರಾತನ ನಿಯಮಗಳನ್ನು ನಾನು ನೆನಪು ಮಾಡಿಕೊಂಡು, ಅವುಗಳಲ್ಲಿ ಆದರಣೆಯನ್ನು ಪಡೆದುಕೊಂಡಿದ್ದೇನೆ.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು.


ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.


ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು