ಕೀರ್ತನೆಗಳು 119:34 - ಕನ್ನಡ ಸಮಕಾಲಿಕ ಅನುವಾದ34 ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು. ಅಧ್ಯಾಯವನ್ನು ನೋಡಿ |
ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.