Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:64 - ಕನ್ನಡ ಸಮಕಾಲಿಕ ಅನುವಾದ

64 ಯೆಹೋವ ದೇವರೇ, ಭೂಮಿಯು ನಿಮ್ಮ ಪ್ರೀತಿಯಿಂದ ತುಂಬಿದೆ; ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ, ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು. ಟೇತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಪ್ರಭು, ನಿನ್ನಚಲ ಪ್ರೀತಿಯಿಂದ ಜಗ ತುಂಬಿದೆ I ನೀಡೆನಗೆ ಪ್ರಭು, ನಿನ್ನ ನಿಬಂಧನೆಗಳ ಬೋಧೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಯೆಹೋವನೇ, ಭೂಲೋಕವು ನಿನ್ನ ಕೃಪೆಯಿಂದ ಪೂರ್ಣವಾಗಿದೆ. ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ನಿನ್ನ ಶಾಶ್ವತ ಪ್ರೀತಿಯು ಭೂಮಿಯನ್ನು ತುಂಬಿಕೊಂಡಿದೆ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:64
9 ತಿಳಿವುಗಳ ಹೋಲಿಕೆ  

ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.


ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು