Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:66 - ಕನ್ನಡ ಸಮಕಾಲಿಕ ಅನುವಾದ

66 ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು, ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:66
15 ತಿಳಿವುಗಳ ಹೋಲಿಕೆ  

ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ, ಆದುದರಿಂದ ನನ್ನ ನಾಲಿಗೆಯು ನಿಮ್ಮ ವಾಕ್ಯವನ್ನು ಹಾಡಿ ಹರಸಲಿ.


ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ; ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.


ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.


ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು