Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:74 - ಕನ್ನಡ ಸಮಕಾಲಿಕ ಅನುವಾದ

74 ನಿಮಗೆ ಭಯಪಡುವವರು ನನ್ನನ್ನು ನೋಡಿ ಆನಂದಿಸಲಿ, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ, ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

74 ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ; ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

74 ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:74
10 ತಿಳಿವುಗಳ ಹೋಲಿಕೆ  

ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.


ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ, ನಿಮ್ಮ ಶಾಸನಗಳನ್ನು ಅರ್ಥಮಾಡಿಕೊಳ್ಳುವವರೂ ನನ್ನ ಬಳಿಗೆ ಬರಲಿ.


ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.


ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.


ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.


ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು