Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:78 - ಕನ್ನಡ ಸಮಕಾಲಿಕ ಅನುವಾದ

78 ಅಹಂಕಾರಿಗಳು ಕಾರಣವಿಲ್ಲದೆ ನನಗೆ ಕೇಡು ಮಾಡಿದ್ದರಿಂದ ನಾಚಿಕೆಪಡಲಿ; ಆದರೆ ನಾನು ನಿಮ್ಮ ಸೂತ್ರಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

78 ಗರ್ವಿಷ್ಠರು ಮಾನಭಂಗ ಹೊಂದಲಿ, ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

78 ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

78 ಗರ್ವಿಷ್ಠರು ಮಾನಭಂಗಹೊಂದಲಿ; ಅವರು ಮೋಸದಿಂದ ನನಗೆ ಕೇಡುಮಾಡಿದ್ದಾರೆ. ನಾನಾದರೋ ನಿನ್ನ ನೇಮಗಳನ್ನು ಧ್ಯಾನಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

78 ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:78
18 ತಿಳಿವುಗಳ ಹೋಲಿಕೆ  

ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.


ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.


ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು.


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”


ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ.


ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.


ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.


ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.


“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು