Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:80 - ಕನ್ನಡ ಸಮಕಾಲಿಕ ಅನುವಾದ

80 ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

80 ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

80 ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

80 ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

80 ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:80
14 ತಿಳಿವುಗಳ ಹೋಲಿಕೆ  

ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.


ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.


ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು