Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:99 - ಕನ್ನಡ ಸಮಕಾಲಿಕ ಅನುವಾದ

99 ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

99 ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

99 ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

99 ನಿನ್ನ ಒಡಂಬಡಿಕೆಯನ್ನು ನಾನು ಧ್ಯಾನಿಸುತ್ತಿರುವುದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:99
16 ತಿಳಿವುಗಳ ಹೋಲಿಕೆ  

ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.


ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು