ಕೀರ್ತನೆಗಳು 12:5 - ಕನ್ನಡ ಸಮಕಾಲಿಕ ಅನುವಾದ5 “ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.” ಅಧ್ಯಾಯವನ್ನು ನೋಡಿ |