Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:9 - ಕನ್ನಡ ಸಮಕಾಲಿಕ ಅನುವಾದ

9 ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಯೆಹೋವದೇವರ ಮಂದಿರ ನಿವಿುತ್ತವಾಗಿ ನಿನಗೆ ಸುಕ್ಷೇಮವನ್ನು ಹಾರೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:9
11 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು