Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:2 - ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರ್ವತಗಳು ಯೆರೂಸಲೇವಿುನ ಸುತ್ತಲೂ ಹೇಗೋ ಹಾಗೆಯೇ ಯೆಹೋವನು ಇಂದಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:2
8 ತಿಳಿವುಗಳ ಹೋಲಿಕೆ  

ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.


ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು