Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 127:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 127:1
35 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ.


ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?


ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.


ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.


ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.


ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.


ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,


ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು.


ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು