ಕೀರ್ತನೆಗಳು 127:2 - ಕನ್ನಡ ಸಮಕಾಲಿಕ ಅನುವಾದ2 ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು. ಅಧ್ಯಾಯವನ್ನು ನೋಡಿ |