ಕೀರ್ತನೆಗಳು 13:3 - ಕನ್ನಡ ಸಮಕಾಲಿಕ ಅನುವಾದ3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು! ಅಧ್ಯಾಯವನ್ನು ನೋಡಿ |