Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 130:6 - ಕನ್ನಡ ಸಮಕಾಲಿಕ ಅನುವಾದ

6 ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುವದಕ್ಕಿಂತ ವಿಶೇಷವಾಗಿ ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 130:6
6 ತಿಳಿವುಗಳ ಹೋಲಿಕೆ  

ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.


ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.


ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.


ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.


ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.


ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು