ಕೀರ್ತನೆಗಳು 131:2 - ಕನ್ನಡ ಸಮಕಾಲಿಕ ಅನುವಾದ2 ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿದ್ದೇನೆ; ತಾಯಿಯ ಬಳಿಯಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ. ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ. ಅಧ್ಯಾಯವನ್ನು ನೋಡಿ |