Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 133:2 - ಕನ್ನಡ ಸಮಕಾಲಿಕ ಅನುವಾದ

2 ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು ಅವನ ಗಡ್ಡದ ಮೇಲೆಯೂ ಅಲ್ಲಿಂದ ಅವನ ಅಂಗಿಗಳ ಕೊರಳಪಟ್ಟಿಯವರೆಗೂ ಹರಿದುಬರುವ ಶ್ರೇಷ್ಠತೈಲದಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 133:2
10 ತಿಳಿವುಗಳ ಹೋಲಿಕೆ  

ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.


ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು.


ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು