Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:19 - ಕನ್ನಡ ಸಮಕಾಲಿಕ ಅನುವಾದ

19 ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಸ್ರಯೇಲಿನ ಗೋತ್ರವೇ, ಭಜಿಸು ಪ್ರಭುವನು I ಆರೋನನ ವಂಶವೇ, ಭಜಿಸು ಆ ವಿಭುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಆರೋನನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇಸ್ರೇಲಿನ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ. ಆರೋನನ ಮನೆತನದವರೇ, ಯೆಹೋವನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:19
8 ತಿಳಿವುಗಳ ಹೋಲಿಕೆ  

ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು; ಇಸ್ರಾಯೇಲರ ಮನೆಯನ್ನು ಆಶೀರ್ವದಿಸುವರು; ಆರೋನನ ಮನೆಯನ್ನು ಆಶೀರ್ವದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು