ಕೀರ್ತನೆಗಳು 136:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಪ್ರೀತಿ ಶಾಶ್ವತವಾದದ್ದು. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.