Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:17 - ಕನ್ನಡ ಸಮಕಾಲಿಕ ಅನುವಾದ

17 ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ; ಅವುಗಳ ಒಟ್ಟು ಅಸಂಖ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಮುಖ್ಯವಾಗಿವೆ. ಅವು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:17
10 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.


ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು