ಕೀರ್ತನೆಗಳು 140:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ. ಅಧ್ಯಾಯವನ್ನು ನೋಡಿ |