Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಮೊರೆಯಿಡುತ್ತೇನೆ, ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೇಗನೆ ಬಾ ಪ್ರಭು, ಮೊರೆಯಿಡುವೆ ನಿನಗೆ I ಮೊರೆಯಿಡುವಾಗಲೆಲ್ಲ ಕಿವಿಗೊಡು ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ಮೊರೆಯಿಡುತ್ತೇನೆ; ಬೇಗನೆ ಬಾ. ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:1
10 ತಿಳಿವುಗಳ ಹೋಲಿಕೆ  

ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.


ದೇವರೇ, ನನ್ನಿಂದ ದೂರವಾಗಿರಬೇಡಿರಿ. ದೇವರೇ, ಬೇಗ ಬಂದು ನನಗೆ ಸಹಾಯಮಾಡಿರಿ.


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ. ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.


ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ; ನೀವು ನನ್ನ ಬಲವಾಗಿದ್ದೀರಿ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.


ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು